ಕಾಂಗ್ರೆಸ್ (Congress) ಗಿಂತ ಮೊದಲೇ ಪತ್ರದ ಮೂಲಕ ಕೇಂದ್ರ ಚುನಾವಣಾ ಆಯೋಗ (Central election commission) ಕ್ಕೆ ಬಿಜೆಪಿ (BJP) ದೂರು ಸಲ್ಲಿಸಿದೆ. 2017 ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನವರು ಮತದಾರರ ಪಟ್ಟಿಯನ್ನು ತಮಗೆ ಬೇಕಾದಂತೆ ಪರಿಷ್ಕರಿಸಲು ಚಿಲುಮೆ ಎಂಬ ಸಂಸ್ಥೆಯನ್ನು ಸರ್ಕಾರಿ ಆದೇಶದ ಮೂಲಕ ನೇಮಿಸಿಕೊಂಡಿದ್ದರು.
ಆದ್ದರಿಂದ ಸಿದ್ದರಾಮಯ್ಯ ಅದರಲ್ಲಿ ಭಾಗಿಯಾಗಿದ್ದರು. ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ (N.Ravikumar) ಪತ್ರದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. 2018 ರ ವಿಧಾನಸಭಾ ಚುನಾವಣೆಗಾಗಿ ಮತದಾರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಮತ್ತು ಸೇರಿಸಲು ಸಿದ್ದರಾಮಯ್ಯ ನವರು ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಬಿಜೆಪಿ ಕಾಂಗ್ರೆಸ್ ಗೆ ಟಕ್ಕರ್ ಕೊಟ್ಟಿದೆ.
ಇದನ್ನೂ ಓದಿ : – ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ