3 ದಿನಗಳ ಹಿಂದೆ ಕರೆಂಟ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಒಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ( SUPREETH ) ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಘಟನೆಯಿಂದ ಬಾಲಕ ಸುಪ್ರೀತ್ ದೇಹದಲ್ಲಿ ಸುಮಾರು ಶೇ.90 ರಷ್ಟು ಸುಟ್ಟ ಗಾಯಗಳಾಗಿತ್ತು. ಇನ್ನೊಬ್ಬ ಬಾಲಕ ಚಂದ್ರು ಕೂಡಾ ಸುಮಾರು ಶೇ.70 ರಷ್ಟು ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದ. ದುರ್ಘಟನೆ ನಡೆದ ತಕ್ಷಣವೇ ಬಾಲಕರನ್ನು ನಗರದ ವಿಕ್ಟೋರಿಯಾ ( VICTORIYA ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಬೆಳಗ್ಗೆ 7:30ರ ವೇಳೆಗೆ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ : – ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ವೈದ್ಯರ ನಿರ್ಲಕ್ಷ್ಯ – ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಹಸುಗೂಸು ಬಲಿ