ದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಸಿದೆ. ಇಂದು ಬೆಳಗ್ಗೆ ಹೊಸ ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಹೊರಡಿಸಿದ್ದು, ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಹೊರತುಪಡಿಸಿ ಕಂಟೈನ್ ಮೆಂಟ್ ಝೋನ್ ಅಲ್ಲದ ಪ್ರದೇಶಗಳಲ್ಲಿ ಉಳಿದೆಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಕಂಟೈನ್ ಮೆಂಟ್ ಝೋನ್ ಗಳಲ್ಲಿ ಮಾತ್ರ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಎಲ್ಲ ರೀತಿಯ ನಿರ್ಬಂಧಗಳು ಇರಲಿವೆ ಎಂದು ನೂತನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ :- ನಕಲಿ ಜಾತಿ ಪ್ರಮಾಣಪತ್ರ- ನಾನು ಗಲ್ಲಿಗೇರಲು ಸಿದ್ಧ ಎಂದ ಶಾಸಕ ರೇಣುಕಾಚಾರ್ಯ
ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮೊದಲಿನಂತೆಯೇ ಮುಂದುವರಿಯುತ್ತದೆ. ಕೇಂದ್ರ ಸರ್ಕಾರವು ಮಾರ್ಚ್ 24, 2020 ರಂದು ದೇಶದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ವಿಪತ್ತು ನಿರ್ವಹಣಾ ಕಾಯಿದೆ, 2005ರ ಅಡಿಯಲ್ಲಿ ಮೊದಲ ಬಾರಿಗೆ ಆದೇಶಗಳು ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ.
ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿದ ಸಂವಹನದಲ್ಲಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮಾತನಾಡಿ, ಕಳೆದ 24 ತಿಂಗಳುಗಳಲ್ಲಿ, ಸಾಂಕ್ರಾಮಿಕ ರೋಗದ ನಿರ್ವಹಣೆಯ ವಿವಿಧ ಅಂಶಗಳಾದ ರೋಗನಿರ್ಣಯ, ಕಣ್ಗಾವಲು, ಸಂಪರ್ಕ ಪತ್ತೆಹಚ್ಚುವಿಕೆ, ಚಿಕಿತ್ಸೆ, . ಲಸಿಕೆ, ಆಸ್ಪತ್ರೆ ಮೂಲಸೌಕರ್ಯ ಮುಂತಾದ ಮಹತ್ವದ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೋವಿಡ್-ಸೂಕ್ತ ನಡವಳಿಕೆಯ ಬಗ್ಗೆ ಸಾರ್ವಜನಿಕರಿಗೆ ಈಗ ಹೆಚ್ಚಿನ ಮಟ್ಟದ ಅರಿವು ಇದೆ ಎಂದು ಹೇಳಿದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಸಾಮರ್ಥ್ಯ ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಿವೆ. ಸಾಂಕ್ರಾಮಿಕ ರೋಗವನ್ನು ನಿರ್ವಹಿಸಲು ತಮ್ಮ ವಿವರವಾದ ನಿರ್ದಿಷ್ಟ ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಹೇಳಿದರು.
ಇದನ್ನು ಓದಿ :- ಹಿರಿಯಣ್ಣನಾಗಿ ನಿಮ್ಮ ಭವಿಷ್ಯ ಉಜ್ವಲಗೊಳಿಸುವೆ – ಉಕ್ರೇನ್ ವಿದ್ಯಾರ್ಥಿಗಳಿಗೆ ಸುಧಾಕರ್ ಅಭಯ