ರೈತರನ್ನು ಬಲಿಪಡೆದಾಯಿತು.. ಈಗ ಸೈನಿಕರ ಸರದಿಯೇ? ಅಗ್ನಿಪಥ್ ಯೋಜನೆ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಸರ್ಕಾರಕ್ಕೆ ದೇಶದ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.


ಅಗ್ನಿಪಥ್ ವಿರೋಧಿಸಿ ಟ್ವೀಟ್ ಮಾಡಿರೋ ಸಿದ್ದರಾಮಯ್ಯ ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ. ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ಇದನ್ನೂ ಓದಿ : – ರಾಹುಲ್ ಗಾಂಧಿಗೆ 3 ದಿನ ED ಯಿಂದ ರಿಲೀಫ್

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿಯೇ ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : –  ಅಮ್ಮನಿಗೆ ಹುಷಾರಿಲ್ಲ..ಆಸ್ಪತ್ರೆಯಲ್ಲಿದ್ದಾರೆ…ದಯವಿಟ್ಟು ವಿಚಾರಣೆ ಮುಂದೂಡಿ ಎಂದ ರಾಗಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!