ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ನಂತರ ಈಗ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಿದೆ.
ಈ ಸಂಬಂಧ ಇಂದು ಆದೇಶ ಹೊರಡಿಸಿರುವ ತಮಿಳುನಾಡು ಸರ್ಕಾರ ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ತಮಿಳುನಾಡಿನಲ್ಲಿ ಕೂಡ ಕಳೆದೆರಡು ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ತಮಿಳುನಾಡಿನಲ್ಲಿ ಗುರುವಾರ 39 ಜನರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದರೆ, ಹಿಂದಿನ ದಿನ 31 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇದನ್ನು ಓದಿ :– ಪಿಎಸ್ ಐ ನೇಮಕಾತಿ ಅಕ್ರಮ – ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ಇದನ್ನು ಓದಿ :– ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಅವ್ರನ್ನ ಹಿಡಿ, ಇವ್ರನ್ನ ಬಿಡಿ ಎನ್ನುವುದಕ್ಕೆ – ಅರಗ ಜ್ಞಾನೇಂದ್ರ