ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಿದೆ. ಪ್ರಯೋಗ ಗುಜರಾತ್ನಲ್ಲೂ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಿಳಿಸಿದರು.
ಮುಖರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯಲ್ಲಿ ಹಾಲಿ ಶಾಸಕರು, ಕುಟುಂಬಸ್ಥರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದೇವೆ. ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದರು. ದೆಹಲಿ ಪಾಲಿಕೆ ಚುನಾವಣೆಯಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಇದನ್ನೂ ಓದಿ :- ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕಾಫಿನಾಡ ಬಿ.ಎಸ್.ರಾಜು ನೇಮಕ
ಗುಜರಾತ್ ಪಾಲಿಕೆ ಚುನಾವಣೆಗಳಲ್ಲಿ ಎರಡು ಬಾರಿ ಗೆದ್ದಿರುವವರನ್ನು ನಿವೃತ್ತಿ ಮಾಡಿದ್ದೇವೆ. ಹೊಸ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಅಧಿಕಾರಕ್ಕೇರಿದ್ದೇವೆ. ಬಿಜೆಪಿಯಲ್ಲಿ ಮಾತ್ರ ಇಂತಹ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದರು.
ಇದನ್ನೂ ಓದಿ :- ಪಿಎಸ್ಐ (PSI) ನೇಮಕಾತಿಯಲ್ಲಿ ಅಕ್ರಮ – ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳು ಅರೆಸ್ಟ್