ದಿ ಕಾಶ್ಮೀರ ಫೈಲ್ಸ್ ಚಿತ್ರ ಕನ್ನಡದಲ್ಲಿ ಡಬಿಂಗ್ ಆಗಲಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಕಾಶ್ಮೀರ ಫೈಲ್ಸ್ ಚಿತ್ರ ಕನ್ನಡದಲ್ಲಿ ಡಬಿಂಗ್ ಮಾಡಬೇಕಾಗಿದೆ. ನಮ್ಗೂ ಈ ಚಿತ್ರ ಅರ್ಥ ಆಗಬೇಕು ಎಂದು ಹೇಳಿದ್ದಾರೆ. ಈ ಸಿನಿಮಾವನ್ನ ಕನ್ನಡಕ್ಕೆ ಡಬ್ ಮಾಡುವ ಪ್ಲ್ಯಾನ್ ನಡೆಯುತ್ತಿದೆ. ಈ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಕನ್ನಡ ಅವತರಣಿಕೆಯನ್ನ ರೆಡಿ ಮಾಡಿಸಿ ಜನರಿಗೆ ತೋರಿಸುವ ಪ್ಲ್ಯಾನ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಆಪ್ತ ಸಚಿವರ ಜೊತೆ ಮಾತಾಡಿದ್ದಾರೆ ಎನ್ನಲಾಗಿದೆ.
0 66 Less than a minute