ಬಾಲಿವುಡ್ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದೆ. ಜೊತೆಗೆ ಒಂದಷ್ಟು ವಿವಾದಗಳನ್ನು ಕೂಡ ಸೃಷ್ಟಿ ಮಾಡಿದೆ. ಈ ಸಿನಿಮಾ ನಿರ್ದೇಶನ ಮಾಡಿರುವ ವಿವೇಕ್ ಅಗ್ನಿಹೋತ್ರಿ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಅಭಿಷೇಕ್ ಅಗರ್ವಾಲ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನ ಬಿಜೆಪಿ ನಾಯಕರು ವೈಭವೀಕರಿಸುತ್ತಿದ್ದರೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.