ಸಚಿವಾಲಯ ನೌಕರರ ಸಂಘ ಕರೆ ನೀಡಿದ್ದ ಬಂದ್ ಬಹುತೇಕ ಯಶಸ್ವಿ – ಶೇ 90ರಷ್ಟು ಸಿಬ್ಬಂದಿ ಗೈರು

ಆಡಳಿತ ಸುಧಾರಣೆ ಮತ್ತು ಆರ್ಥಿಕ ಮಿತವ್ಯಯ ಕಾಪಾಡುವ ನಿಟ್ಟಿನಲ್ಲಿ ಸಚಿವಾಲಯದ ಹಲವು ಹುದ್ದೆಗಳನ್ನು ಕಡಿತಗೊಳಿಸಿದ ಕ್ರಮ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯ ನೌಕರರ ಸಂಘ ಕರೆ ನೀಡಿದ್ದ ಬಂದ್ ಬಹುತೇಕ ಯಶಸ್ವಿಯಾಗಿದೆ.

ಅಧಿಕಾರಿಗಳನ್ನು ಹೊರತುಪಡಿಸಿ 85% ರಿಂದ 90%ರಷ್ಟು ಸಿಬ್ಬಂದಿ ಕಚೇರಿಗೆ ಹಾಜರಾಗದೆ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ಬಂದ್ ನ್ನ ಗಂಭೀರವಾಗಿ ಪರಿಗಣಿಸಿದೆ. ಸಚಿವಾಲಯದ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೂಚಿಸಿ ಸುತ್ತೋಲೆ ಹೊರಡಿಸಿದ್ದರು. ಸಚಿವಾಲಯದ ನೌಕರರ ಸಂಘದವರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬಂದ್ಗೆ ಕರೆ ನೀಡಿರುವುದು ಕಾನೂನು ಬಾಹಿರವಾಗಿದೆ. ಇದನ್ನೂ ಓದಿ : – ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ

ಸರ್ಕಾರ (Government ) ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯದ ಎಲ್ಲ ಸಿಬ್ಬಂದಿ (staff ) ಮತ್ತು ಅಧಿಕಾರಿಗಳು (officers ) ಕೆಲಸಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಒಂದು ವೇಳೆ ಮೇಲಾಧಿಕಾರಿಗಳ ಅನುಮತಿ ಪಡೆಯದೆ ಗೈರು ಹಾಜರಾದರೆ ಅದನ್ನು ಲೆಕ್ಕಕ್ಕಿಲ್ಲದ ಅವಧಿ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಆದರೆ, ಇದ್ಯಾವುದಕ್ಕೂ ಕ್ಯಾರೇ ಎನ್ನದ ಸಚಿವಾಲಯ ಸಿಬ್ಬಂದಿ, ತಮ್ಮ ತಮ್ಮ ಕಚೇರಿಗೆ ಹಾಜರಾಗದೆ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಗಮನ ಸೆಳೆಯಲು ಅನಿವಾರ್ಯವಾಗಿ ಬಂದ್ ಮಾಡಿದ್ದೇವೆ. ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತಿಲ್ಲ. ಮುಖ್ಯಮಂತ್ರಿಗಳ ಗಮನ ಸೆಳೆಯಲು ಈ ಬಂದ್ ಕರೆ ನೀಡಲಾಗಿದೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಬಂದ್ ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ : – ಜಮ್ಮು-ಕಾಶ್ಮೀರದ ಲಡಾಕ್ ನಲ್ಲಿ ಭಾರೀ ಅಪಘಾತ – 7 ಮಂದಿ ಯೋಧರು ಹುತಾತ್ಮ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!