ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ, ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನವೇ ಅಂತಿಮವಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಪಕ್ಷದ ನಿರ್ಧಾರ ಗೌರವಿಸಿ, ಸೌಜನ್ಯದಿಂದ ವರ್ತಿಸುವಂತೆ ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳಿಗೆ ವಿಜಯೇಂದ್ರ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಪಕ್ಷದ ಈ ನಿರ್ಧಾರವನ್ನು ಅನುಸರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಇತರೆಡೆ ಅನಗತ್ಯ ಕಾಮೆಂಟ್‌ಗಳನ್ನು ಮಾಡದಂತೆ ಮನವಿ ಮಾಡಿದ್ದಾರೆ. ಇದು ಪಕ್ಷದ ಪ್ರತಿಷ್ಠೆಗೆ ಮಾತ್ರವಲ್ಲದೆ ಯಡಿಯೂರಪ್ಪ ಹಾಗೂ ತಮ್ಮ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ :- ದಾವೋಸ್ ನಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪನಿ ಜೊತೆ ರಾಜ್ಯ ಸರ್ಕಾರ 50,000 ಕೋಟಿ ರೂಪಾಯಿ ಹೂಡಿಕೆಯ ಒಪ್ಪಂದ..!
ನಾನು ರಾಜಕೀಯಕ್ಕೆ ಬಂದಾಗಿನಿಂದ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷನಾಗಿ ಕೆಲಸ ಮಾಡುವ ಅವಕಾಶವನ್ನು ನೀಡುವ ಮೂಲಕ ಪಕ್ಷ ಮತ್ತು ನಮ್ಮ ನಾಯಕರು ಯಾವಾಗಲೂ ನನಗೆ ಪ್ರೋತ್ಸಾಹ ಮತ್ತು ಬೆಂಬಲವಾಗಿ ನಿಂತಿದ್ದಾರೆ. ರಾಜಕೀಯದಲ್ಲಿ ಅಧಿಕಾರ ಮತ್ತು ಸ್ಥಾನಮಾನವೇ ಅಂತಿಮವಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಎಲ್ಲಾ ಕಾರ್ಯಕರ್ತರು ಮತ್ತು ನನ್ನ ಬೆಂಬಲಿಗರಲ್ಲಿ ಮನವಿ ಮಾಡುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
‘ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈಬಿಟ್ಟಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲ, ಸಹಕಾರ ಸದಾ ಇರಲಿ‘ ಎಂದು ವಿನಂತಿಸಿದ್ದಾರೆ.
ಇದನ್ನೂ ಓದಿ :- ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ವಜಾ – ಭ್ರಷ್ಟಾಚಾರ ಆರೋಪದ ಮೇಲೆ ಬಂಧನ