ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ಮಾತನಾಡುವುದಕ್ಕಿಂತ ಪ್ರಧಾನ ಮಂತ್ರಿಗೆ ಸಿನಿಮಾದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ಪ್ರಧಾನಿ ನರೆಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕಾಶ್ಮೀರಿ ಪಂಡಿತರ ನರಮೇಧಕ್ಕಿಂತ ಪ್ರಧಾನಮಂತ್ರಿಯವರಿಗೆ ಚಿತ್ರದ ಬಗ್ಗೆ ಮಾತನಾಡುವುದು ಮುಖ್ಯವಾಗಿದೆ ಎಂದು ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ : – ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾಲಿಬಾನ್ ಸರ್ಕಾರ ಬರುತ್ತೆ – ಪ್ರತಾಪ್ ಸಿಂಹ
ಬಿಜೆಪಿಯ ನೀತಿಗಳಿಂದಾಗಿ ಇಂದು ಕಾಶ್ಮೀರದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿದೆ. ಮೊದಲು ಭದ್ರತೆಯ ಜವಾಬ್ದಾರಿಯನ್ನು ತೆಗೆದುಕೊಂಡು ಶಾಂತಿ ಸ್ಥಾಪಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : – ಜಿಟಿ ದೇವೇಗೌಡ ಮೊಮ್ಮಗಳು ಅನಾರೋಗ್ಯದಿಂದ ವಿಧಿವಶ