ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೇಸರಿ ಧ್ವಜ ರಾಷ್ಟ್ರಧ್ವಜ ಆಗಬಹುದು ಎಂಬುದಕ್ಕೆ ನಾನು ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಅದಕ್ಕೂ ಮೊದಲು ಯಾವ ಧ್ವಜ ಇತ್ತು. ಮೊದಲು ಬ್ರಿಟಿಷರ ಧ್ವಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು ಎಂದು ಹೇಳಿದ್ದಾರೆ. ಆಕಸ್ಮಾತ್ ರಾಜ್ಯಸಭೆ, ಲೋಕಸಭೆಯಲ್ಲಿ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಎಂದು ಏನೂ ಇಲ್ಲ. ಹೀಗೆಯೇ ಮುಂದುವರಿದರೆ ಹಿಂದೂ ಸಮಾಜ ಒಟ್ಟಾಗುತ್ತೆ. ಇವತ್ತು ಕಾಶ್ಮೀರ ಫೈಲ್ಸ್ ನಲ್ಲಿ ನೀವು ನೋಡೋದು ಸಣ್ಣ ತುಣುಕಷ್ಟೇ. ದೇಶದಲ್ಲಿ ಧರ್ಮದ ಹತ್ಯೆ ಆದಾಗಲೂ ಕಾಂಗ್ರೆಸ್ ಒಪ್ಪಿಕೊಂಡಿತು ಎಂದು ಕಿಡಿ ಕಾರಿದ್ದಾರೆ.
0 118 Less than a minute