ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ರಾಜೀನಾಮೆ ಕೇಳೋದು ಸ್ವಾಭಾವಿಕ, ನಾವು ವಿಪಕ್ಷದಲ್ಲಿದ್ರು ಅದೇ ಮಾಡ್ತಾ ಇದ್ವಿ. ಮುಖ್ಯಮಂತ್ರಿ ಇದ್ದಾರೆ ಸ್ವತಃ ಈಶ್ವರಪ್ಪ ಇದ್ದಾರೆ. ವಯಸ್ಸು ಅನುಭವ ಎರಡರಲ್ಲೂ ದೊಡ್ಡವರು. ಸಾರ್ವಜನಿಕ ಜೀವನದಲ್ಲಿ ಅನಿರ್ವಾಯವಾಗಿ ತಲೆಕೊಡುವ ಪರಿಸ್ಥಿತಿ ಬರುತ್ತದೆ. ಇದನ್ನು ಓದಿ :- ಪಕ್ಷಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಇದನ್ನೆಲ್ಲಾ ಮಾಡುತ್ತಿದೆ – ಸುಧಾಕರ್
ಮುಖ್ಯಮಂತ್ರಿ, ಈಶ್ವರಪ್ಪ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ. ಸಾರ್ವಜನಿಕ ಸಂಶಯ ದೂರಾಗಿಸಲು ಸಿಎಂ, ಈಶ್ವರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪಕ್ಷದಿಂದ ಯಾವುದೇ ಸೂಚನೆ ನೀಡಿಲ್ಲ. ಮೇಲ್ನೋಟಕ್ಕೆ ಈಶ್ವರಪ್ಪನವರ ಪಾತ್ರ ಕಂಡುಬಂದಿಲ್ಲ. ನಾನು ಹೇಳಿದ್ರೆ ಯಾರು ನಂಬಲ್ಲ. ನಾನು ತನಿಖಾ ಎಜೆನ್ಸಿ ಅಲ್ಲ, ಕಾಂಗ್ರೆಸ್, ಬೇರೆಯವರು ದಾಖಲೆ ಇದ್ರೆ ತನಿಖಾ ಎಜೆನ್ಸಿ ಮುಂದೆ ಸಲ್ಲಿಸಲಿ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸ್ತಾರೆ ಹೇಳಿದ್ರು.
ಇದನ್ನು ಓದಿ :- ಈಶ್ವರಪ್ಪ ತಲೆದಂಡ ಖಚಿತನಾ..?- ಅನುಮಾನಕ್ಕೆ ಎಡೆ ಮಾಡಿಕೊಟ್ಟ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೌನ