ರಾಮನಗರ : ಇನ್ನು ಮುಂದೆ ನಾನು ರಾಜಕಾರಣದ ಬಗ್ಗೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ಮ ಪಕ್ಷದ ವರಿಷ್ಠರು ಗೊಂದಲಕ್ಕೆ ತೆರೆ ಎಳೆಯಲಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಣಾಡಿದ ಅವರು, ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪನವರೇ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಮ್ಮದು ಏನಿಲ್ಲ. ನಾವೆಲ್ಲರೂ ಅವರನ್ನು ಒಪ್ಪಿಕೊಳ್ಳುತ್ತೇವೆ. ಯಾರು ಬೇಡ ಎನ್ನುತ್ತಾರೆ? ಈ ಸಂದರ್ಭದಲ್ಲಿ ನಾನು ಏನೂ ಹೇಳುವುದಿಲ್ಲ ಎಂದರು.
ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳ ಬಗ್ಗೆ ವರಿಷ್ಠರು ನೋಡಿಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ. ಪಕ್ಷದ ವರಿಷ್ಠರು ಎಲ್ಲಾ ಗೊಂದಲಕ್ಕೆ ತೆರೆ ಎಳೆಯುತ್ತಾರೆ ಎಂದು ಹೇಳಿದರು.