ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ (Rss) ಮುಖ್ಯಸ್ಥ ಮೋಹನ್ ಭಾಗವತ್ (Mohan bhagawat) ಹೇಳಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿ (Gyanvapi mosque) ಕೋರ್ಟ್ ಆದೇಶದ ಮೇರೆಗೆ ನಡೆದ ವಿಡಿಯೊ ಸಮೀಕ್ಷೆಯಲ್ಲಿ ಶಿವಲಿಂಗದಂಥ(Shivalinga) ಆಕೃತಿ ಪತ್ತೆಯಾಗಿದೆ ಎಂಬ ವರದಿಗಳು ಬಹಿರಂಗವಾದ ನಂತರ ಹಿಂದೂ-ಮುಸ್ಲಿಂ(Hindhu muslim) ಸಮುದಾಯಗಳ ನಡುವೆ ವೈಮನಸ್ಸು ಮೂಡುವ ಬೆಳವಣಿಗೆಗಳು ನಡೆದಿತ್ತು. ಪ್ರಸ್ತುತ ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದೀಗ ಆರ್ಎಸ್ಎಸ್ ಮುಖ್ಯಸ್ಥರು ನೀಡಿರುವ ಹೇಳಿಕೆಯು ಹಲವು ಕಾರಣಗಳಿಂದ ಮಹತ್ವ ಪಡೆದಿದೆ.ಕೆಲವು ಪ್ರದೇಶಗಳ ಬಗ್ಗೆ ನಮಗೆ ಭಕ್ತಿ ಇರುತ್ತದೆ. ಅದರ ಬಗ್ಗೆ ನಾವು ಮಾತನಾಡುತ್ತಿರುತ್ತೇವೆ. ಆದರೆ ಪ್ರತಿದಿನ ಹೊಸಹೊಸ ಸ್ಥಳಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಾಗಲಾರದು. ನಾವು ಪ್ರತಿದಿನ ಹೊಸಹೊಸ ವಿವಾದಗಳನ್ನು ಹುಟ್ಟುಹಾಕಬಾರದು. ಜ್ಞಾನವಾಪಿ ಮಸೀದಿ ಬಗ್ಗೆ ನಮಗೆ ಶ್ರದ್ಧೆಯಿದೆ. ಆ ವಿಚಾರದಲ್ಲಿ ನಾವು ಏನು ಮಾಡುತ್ತಿದ್ದೇವೆಯೋ ಅದು ಆ ಶ್ರದ್ಧೆಗೆ ಅನುಗುಣವಾಗಿದೆ. ಹಾಗೆಂದು ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದು ಸರಿಯೇ’ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ : – ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಗೆ ಕೋವಿಡ್ ಪಾಸಿಟಿವ್