ಬೆಂಗಳೂರು : ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ ಎಂದರು.
ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.