ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ನಾನು ಹೆದರಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡಲ್ಲ ಎಂದು ತಿಳಿಸಿದ್ದಾರೆ.
ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು. ಈ ಬಗ್ಗೆ ನಾನು ಈಗಾಗಲೇ ಸಿಎಂಗೆ ಮನವಿ ಮಾಡಿದ್ದೇನೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ಸಂತೋಷ್ ಪಾಟೀಲ್ ಯಾವುದೇ ಡೆತ್ ನೋಟ್ ಬರೆದಿಲ್ಲ. ಇದನ್ನು ಓದಿ :- ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ
ಯಾವುದೇ ಸಹಿ ಮಾಡಿದ ಡೆತ್ ನೋಟ್ ಪತ್ತೆಯಾಗಿಲ್ಲ. ನಿಯಮ ಇಲ್ಲದೆ ಕಾಮಗಾರಿ ಮಾಡಿದ್ರೆ ಬಿಲ್ ಕೊಡಬೇಕಾ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ. ಸಂತೋಷ್ ಪಾಟೀಲ್ ಕುಟುಂಬಸ್ಥರನ್ನು ನಾನು ನೋಡಿಲ್ಲ. ಹೈಕಮಾಂಡ್ ನಾಯಕರು ನನ್ನ ಸಂಪರ್ಕಿಸಿಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ. ನನ್ನ ವಿರುದ್ಧದ ಆರೋಪದ ಬಗ್ಗೆ ಕೋರ್ಟ್ ಮೊರೆ ಹೋಗಿದ್ದೆ. ನೊಟೀಸ್ ನೀಡಿದ ಬಳಿಕ ಇಂತಹ ಘಟನೆ ನಡೆದಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಇದನ್ನು ಓದಿ :- ಆರೋಗ್ಯ ಇಲಾಖೆಯಲ್ಲೂ ಭ್ರಷ್ಟಾಚಾರ ! ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡಿ – ಗುತ್ತಿಗೆದಾರರ ಸಂಘ ಆಗ್ರಹ