ಬೆಂಗಳೂರು : ಕೊರೊನಾ ತಡೆಯ ಮಾರ್ಗವೆಂದ್ರೇ ಲಸಿಕೆ ಪಡೆಯುವುದು. ರಾಜ್ಯದ ಜನರು ತಪ್ಪದೇ ಲಸಿಕೆ ಪಡೆಯಬೇಕು. ಕೊರೋನಾ ವಿರುದ್ಧದ ಹೋರಾಟಕ್ಕೆ ಇದು ಸಹಕಾರಿ ಆಗಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಲಸಿಕೆಯ ಕೊರತೆ ಇಲ್ಲ. ಕಡ್ಡಾಯವಾಗಿ ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಪಡೆಯಬೇಕು. 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಿರಿ. 3ನೇ ಅಲೆ ತಡೆಯಬೇಕು ಅಂದರೇ ಕೊರೋನಾ ಲಸಿಕೆ ಪಡೆಯಬೇಕು ಎಂದರು.
ಕೊರೋನಾ ಲಸಿಕೆ ನೀಡುವುದನ್ನ ಮುಂದುವರೆಸುತ್ತೇವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.