ಮೈಸೂರು : ನಮ್ಮಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಯಾರು ಕೃತಕ ಅಭಾವ ಸೃಷ್ಟಿಸುತ್ತಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ. ಇದು ಕೃತಕವಾಗಿ ಅಭಾವ ಸೃಷ್ಟಿ ಮಾಡುವ ಉದ್ದೇಶ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೈಸೂರಿನಲ್ಲಿ ಈಗಾಗಲೇ ನಾಲ್ಕು ಕೇಸ್ ದಾಖಲಾಗಿದೆ. ಹಲವರು ಅಕ್ರಮವಾಗಿ ಗೋದಾಮಿನಲ್ಲಿ ಇಟ್ಟು ಅಭಾವ ಸೃಷ್ಟಿಸಿದ್ದಾರೆ. ಇದರಿಂದ ರೈತರು ಕ್ಯೂ ನಲ್ಲಿ ನಿಲ್ಲುವ ಸಮಸ್ಯೆ ಉಂಟಾಗುತ್ತಿದೆ ಎಂದರು.
ಬಳ್ಳಾರಿಯಲ್ಲಿ ನಡೆದ ಘಟನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರೋದಿಲ್ಲ. ಅದು ಖಾಸಗಿ ಸಂಸ್ಥೆಯವರು ಮಾಡಿದ ಸಮಸ್ಯೆ. ಕೃತಕ ಅಭಾವ ಸೃಷ್ಟಿಸುವ ಉದ್ದೇಶದಿಂದ ಹೀಗೆ ಆಗಿದೆ. ಯಾರು ಕೃತಕ ಅಭಾವ ಸೃಷ್ಟಿಸುತ್ತಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಸಿ ಪಾಟೀಲ್ ತಿಳಿಸಿದರು.