ಇದು ಆನೆ ಪ್ರಕರಣ ಅಲ್ಲ ರಾಜಕೀಯ ದಾಳಿ – ಎಂ.ಪಿ ಕುಮಾರಸ್ವಾಮಿ

ಚಿಕ್ಕಮಗಳೂರು ( CHIKKAMAGALURU ) ಜಿಲ್ಲೆ ಮೂಡಿಗೆರೆಯಲ್ಲಿ ತನ್ನ ಮೇಲೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ ಕುಮಾರಸ್ವಾಮಿ ( M.P KUMARASWAMY ) ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕಮಗಳೂರು ( CHIKKAMAGALURU ) ಜಿಲ್ಲೆ ಮೂಡಿಗೆರೆಯಲ್ಲಿ ತನ್ನ ಮೇಲೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ ಕುಮಾರಸ್ವಾಮಿ ( M.P KUMARASWAMY ) ಪ್ರತಿಕ್ರಿಯೆ ನೀಡಿದ್ದಾರೆ.

ಬೇಕಂತ ಕೆಲವು ಗುಂಪು ರೆಡಿ ಮಾಡಿ ಸಂಚು ಮಾಡಿದ್ರು, ಶಾಸಕರೇ ಆನೆ ಸಾಕಿದ್ದಾರೆ ಎಂಬ ಅಭಿಪ್ರಾಯವನ್ನು ಹೊರಹಾಕಿದ್ರು, ನನಗೆ ಚಪ್ಪಲಿಯಲ್ಲಿ ಹೊಡೆದರು. ಎಲ್ಲರ ಕೈನಲ್ಲೂ ದೊಣ್ಣೆ ಇತ್ತು. ಕಳ್ಳ, ಹುಚ್ಚು ನಾಯಿ ರೀತಿ ನನ್ನನ್ನ ಅಟ್ಟಾಡಿಸಿದರು. ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊಡೆದರು. ಇದನ್ನೂ ಓದಿ : –  ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್ – ADGP ಅಲೋಕ್ ಕುಮಾರ್

ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ. ಬನಿಯನ್ ಇತ್ತು ಬಟ್ಟೆ ಹರಿದದ್ದು ಕಾಣಲಿಲ್ಲ, ಬನಿಯನ್ ತೆಗೆದರೆ ಹರಿದದ್ದು ಕಾಣುತ್ತೆ. ಬಟ್ಟೆ ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ ಏನು ಮಾಡೋದು. ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ಇದೊಂದು ವ್ಯವಸ್ಥಿತ ಹಲ್ಲೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ನಾನು ಒಂದೇ ಒಂದು ಮಾತನಾಡಿಲ್ಲ, ಬಹಳ ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ನನ್ನ ಮೂಲಕ ಎಲ್ಲಾ ಶಾಸಕರಿಗೂ ಸರ್ಕಾರ ಭದ್ರತೆ ನೀಡಬೇಕು.

ನಾನು ಕಾಡು ಕಾಯಲ್ಲ, ಆನೆ ಸಾಕಿಲ್ಲ, ಸರ್ಕಾರಕ್ಕೆ ದೂರು ನೀಡಬಹುದು, ನೀಡುತ್ತೇನೆ. ನಾನು ಕೋರ್ಟ್ ಅಲ್ಲ, ಕ್ಷೇತ್ರಕ್ಕೆ ಸಾಕಷ್ಟು ಹಣ ತಂದಿದ್ದೇನೆ. ಇಂದು ಹೋಗಿ ಎಲ್ಲರಿಗೂ ಸಾಂತ್ವನ ಹೇಳಿದ್ದೇನೆ. ಆನೆ ಸ್ಥಳಾಂತಕ್ಕೆ ನಾಳೆಯೇ ಕ್ರಮ ಕೈಗೊಳ್ಳುತ್ತೇವೆ, ಬೆಂಗಳೂರಿಗೆ ಹೋಗುತ್ತೇನೆ. ಈ ಬಗ್ಗೆ ವರಿಷ್ಟರು, ಸಿಎಂ, ಗೃಹ ಮಂತ್ರಿ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.

ಪೊಲೀಸ್ ವೈಫಲ್ಯ ಇದರಲ್ಲಿ ಇದೆ. ಕೇವಲ 10 ಜನ ಪೊಲೀಸರು ಮಾತ್ರ ಇದ್ರು, ಪೊಲೀಸರು ಮಿಸ್ಗೈಡ್ ಮಾಡಿ ನನ್ನನ್ನು ಅಲ್ಲಿಂದ ಕಳುಹಿಸಿದ್ರು, ನಾನು ಅಲ್ಲೇ ಇರುತ್ತಿದ್ದೆ. ಯಾವುದೇ ಕಾರಣಕ್ಕೂ ಆ ಜಾಗವನ್ನು ಬಿಟ್ಟು ನಾನು ಬರುತ್ತಿರಲಿಲ್ಲ. ಸಾರ್ವಜನಿಕ ಸೇವೆಯಲ್ಲಿರುವ ನಾನು ಎಲ್ಲ ತ್ಯಾಗಕ್ಕೂ ಸಿದ್ಧ ಇದ್ದೇನೆ. ಪೊಲೀಸರಿಂದ ಆಗಿರುವ ತಪ್ಪಿನಿಂದ ನನಗೆ ಹೀಗೆಲ್ಲಾ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : –  ಮಂಗಳೂರು ಸ್ಪೋಟ ಪ್ರಕರಣ – ಉಗ್ರ ಮತಿನ್ ಪತ್ತೆಗೆ NIA ಎರಡು ಲಕ್ಷ ರೂಪಾಯಿ ಬಹುಮಾನ ಘೋಷಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!