ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಬಂದ್ ಗೆ ಕರೆ ಕೊಡಲಾಗಿದೆ. ಈ ಕುರಿತು ಮಾತನಾಡಿದ ಸಿಎಂ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡ್ತೇವೆ ಎಂದು ಘೋಷಿಸಿದರು. ರಾಯಚೂರಿನಲ್ಲಿ ಕಲುಷಿತ ನೀರಿನ ಹಿನ್ನೆಲೆ ಡಿಸಿಗೆ ರಾಯಚೂರಿನ ಎಲ್ಲ ವಾರ್ಡ್ ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ. ಅಧಿಕಾರಿಗಳ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ರಿಲೀಫ್ ಫಂಡ್ ನಿಂದ ಪರಿಹಾರ ನೀಡಲಾಗುತ್ತೆ ಎಂದರು.
ಇದನ್ನು ಓದಿ :- ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕೀಯ ಮಾಡ್ತಾರೆ – ಸಿಎಂ ಬೊಮ್ಮಾಯಿ