ಒಂದೇ ಕುಟುಂಬದ ಮೂವರು ಮಹಿಳೆಯರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದ ನಿವಾಸಿಗಳಾದ ಅಜ್ಜಿ ವೀಣಾ (70), ತಾಯಿ ಶಾರದಾ (49) ಮತ್ತು ಮೊಮ್ಮಗಳು ಶ್ರಾವ್ಯ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.