ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 23,24,25 ನೇ ತಾರೀಖು ಉತ್ತರ ಒಳನಾಡಿನ ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಬಹುತೇಕ ಜಿಲ್ಲೆಯ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
0 87 Less than a minute