ಚೀನಾದ ಚಾಂಗ್ ಕಿಂಗ್ (CHANG KING ) ನಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ತಪ್ಪಿದೆ. ಟಿಬೆಟ್ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್ ವೇನಲ್ಲಿ ಹೊತ್ತಿ ಉರಿದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ ಅವಘಡ ನಡೆದಿದೆ.
ಚೀನಾದ ಅಧಿಕೃತ ಪತ್ರಿಕೆ ಪೀಪಲ್ಸ್ ಡೈಲಿ ಪ್ರಕಾರ, ಈ ವಿಮಾನದಲ್ಲಿ 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿ ಇದ್ದರು ಎನ್ನಲಾಗಿದ್ದು, 40 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ ಬಸ್ ಎ319 ವಿಮಾನ ಚೋಂಗ್ ಕಿಂಗ್ ನಿಂದ ಟಿಬೆಟ್ ನ ರಾಜಧಾನಿ ಲ್ಹಾಸಾಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ : – ಆಸಾನಿಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ