ಶ್ರೀರಾಮನವಮಿ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಭಾನುವಾರ ನಡೆಯಬೇಕಿದ್ದ ಶೋಭಾಯಾತ್ರೆಯನ್ನು ರದ್ದು ಮಾಡಲಾಗಿದೆ. ಶ್ರೀರಾಮನ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆದ ಹಿನ್ನೆಲಯಲ್ಲಿ ಜಿಲ್ಲಾಡಳಿತ ಮಂಡಳಿಯು ಇದೀಗ ಯಾತ್ರೆಯನ್ನು ರದ್ದು ಮಾಡಿದೆ.
ಯಾತ್ರೆಯನ್ನು ರದ್ದುಪಡಿಸಿರುವ ಅಧಿಕಾರಿಗಳು ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ, ಹೋಮ, ಪ್ರಸಾದ ವಿನಿಯೋಗಕ್ಕೆ ಅನುಮತಿ ನೀಡಿದೆ. ಹಾಗೂ ಸಭಾ ಕಾರ್ಯಕ್ರಮಕ್ಕೆ ಅನುಮದಿ ನೀಡಿದೆ. ಕಾರ್ಯಕ್ರಮ ಸಮಯದಲ್ಲಿ ಕೋಮು ಗಲಭೆಗೆ ಉತ್ತೇಜಿಸುವ ಯಾವುದೇ ಪ್ರಚೋದನಾಕಾರಿ ಭಾಷಣ ಮತ್ತು ಘೋಷಣೆಗಲನ್ನು ಕೂಗುವಂತಿಲ್ಲ ಎಂದು ಕಾರ್ಯಕ್ರಮದ ಆಯೋಜಕರಿಗೆ ಸೂಚನೆ ನೀಡಿದೆ. ಇದನ್ನು ಓದಿ : – ಚಂದ್ರು ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ – ಅರಗ ಜ್ಞಾನೇಂದ್ರ
ಬೆಂಗಳೂರಿನಲ್ಲಿ ಬಿಗಿ ಭದ್ರತೆ
ಇಂದು ರಾಮನವಮಿ ಹಿನ್ನೆಲೆ ನಗರದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ. ಬಿಗಿ ಭದ್ರತೆ ಕೈಗೊಳ್ಳುವಂತೆ ಡಿಸಿಪಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ. ಆಯಾ ಠಾಣೆ ಇನ್ಸ್ಪೆಕ್ಟರ್ಗಳಿಗೆ ಡಿಸಿಪಿಗಳು ಹೊಣೆ ಹೊರಿಸಿದ್ದಾರೆ. ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಸಿಬ್ಬಂದಿ ರೌಂಡ್ಸ್ ಹಾಕಬೇಕು. ನಗರದಲ್ಲಿ ಶ್ರೀರಾಮ ಮಂದಿರ ಇರುವ ಕಡೆಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣು ಇಟ್ಟಿರಬೇಕೆಂದು ಪೊಲೀಸರಿಗೆ ಸೂಚಿಸಲಾಗಿದೆ.
ಇದನ್ನು ಓದಿ : – 161 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹ ಉದ್ಘಾಟಿಸಿದ ಸಿಎಂ