ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ ನಲ್ಲಿ ಪ್ರಚಂಡ ಬಹುಮತ ಪಡೆದಿರುವ ಬಿಜೆಪಿ ಇಂದು ಏಳನೇ ಬಾರಿಗೆ ಸರ್ಕಾರ ರಚಿಸಲಿದೆ.

ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ ನಲ್ಲಿ ಪ್ರಚಂಡ ಬಹುಮತ ಪಡೆದಿರುವ ಬಿಜೆಪಿ ( BJP ) ಇಂದು ಏಳನೇ ಬಾರಿಗೆ ಸರ್ಕಾರ ರಚಿಸಲಿದೆ.

ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ( BHUPENDRA PATEL ) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಲಿದ್ದಾರೆ. ಸಿಎಂ ಜೊತೆ ಇಂದು ಒಟ್ಟು 25 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುಜರಾತ್ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆಲುವು ಸಾಧಿಸಿತ್ತು. ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿ ಆಗಲಿದ್ದಾರೆ.

Ex-Karnataka Chief Minister BS Yediyurappa makes BIG announcement, VACATES  his Shikaripura seat for THIS person | India News | Zee News

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ( B.S YEDIURAPPA ) ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಗುಜರಾತ್ ಚುನಾವಣೆ ವೇಳೆ ಅಬ್ಬರದ ಪ್ರಚಾರದ ಮೂಲಕ ಗಮನಸೆಳೆದ ಬಿ.ಎಲ್ ಸಂತೋಷ್ ಸೇರಿದಂತೆ ಹಲವು ಸಂಸದರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಪ್ರಧಾನಿ ಸೇರಿದಂತೆ ವಿವಿಐಪಿಗಳಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಗುಜರಾತ್‌ಗೆ ಪ್ರಯಾಣ ಬೆಳೆಸಿದ್ದು, ಸಿಎಂ ಜೊತೆ ಸಚಿವ ಬಿ.ಸಿ ನಾಗೇಶ್ ಹಾಗೂ ಭೈರತಿ ಬಸವರಾಜ್ ತೆರಳಿದ್ದಾರೆ.

ಇದನ್ನು ಓದಿ : –  ಪಕ್ಷ ಯಾವುದೇ ಸವಾಲು ನೀಡಿದರೂ ನಿಭಾಯಿಸುತ್ತೇನೆ – ಬಿ.ವೈ ವಿಜಯೇಂದ್ರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!