ಟೋಕಿಯೊ ಒಲಿಂಪಿಕ್ಸ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಹಾಲೆಂಡ್ ನ ಇಬ್ಬರು ಅಥ್ಲೀಟ್ ಹಾಗೂ ಸಹಾಯಕ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಹಾಲೆಂಡ್ ನ ಟೆಕ್ವೆಂಡೋ ತಂಡದ ರೇಷ್ಮಿ ಓಗ್ನಿಕ್ ಮತ್ತು ರೋಯಿಂಗ್ ತಂಡದ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ತಂಡ ಹೇಳಿಕೆಯಲ್ಲಿ ತಿಳಿಸಿದೆ.
ಕೊರೊನಾ ಹರಡುವಿಕೆ ತಡೆಯಲು ಗರಿಷ್ಠ ಪ್ರಯತ್ನ ಮಾಡಲಾಗುತ್ತಿದೆ. ಈ ರೀತಿಯ ಬೆಳವಣಿಗೆ ತಂಡದ ಮೇಲೆ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಂಡದ ಪ್ರಕಟಣೆ ತಿಳಿಸಿದೆ.