ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಗುರುವಾರ ಆರಂಭವಾಗಲಿರುವ ಟೊಕಿಯೊ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಿಂದ ಕೆಲವು ಶೂಟರ್ ಗಳು ಗೈರು ಹಾಜರಾಗಲಿದ್ದಾರೆ.
ಟೊಕಿಯೊ ಒಲಿಂಪಿಕ್ಸ್ ನಲ್ಲಿ 15 ಶೂಟರ್ ಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲವು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.
ಅಲ್ಲದೇ ಸಾವಿರಾರು ಜನರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಶೂಟರ್ ಗಳು ಉದ್ಘಾಟನಾ ಸಮಾರಂಭದಿಂದ ಹೊರಗುಳಿಯಲಿದ್ದಾರೆ.