ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಮೊದಲ ಮಹಿಳೆ ಎಂದು ಇತಿಹಾಸ ನಿರ್ಮಿಸಿದ್ದಾರೆ.
ಭಾನುವಾರ ಕಂಚಿನ ಪದಕಕ್ಕಾಗಿ ನಡೆದ ವನಿತೆಯರ ಸಿಂಗಲ್ಸ್ ನಲ್ಲಿ ಪಿವಿ ಸಿಂಧು 21-13, 21-15ರಿಂದ ಚೀನಾದ ಹಿ ಬಿಂಜಿಯಾವ್ ಅವರನ್ನು ಮಣಿಸಿದರು.
ಪಿವಿ ಸಿಂಧು ಸತತ 2 ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಹಾಗೂ ಭಾರತದ 2ನೇ ಕ್ರೀಡಾಪಟು ಎನಿಸಿಕೊಂಡರು. ಇದಕ್ಕೂ ಮುನ್ನ ಸುಶೀಲ್ ಕುಮಾರ್ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದರು.