ಹಲವು ದಿನಗಳಿಂದ ಮಳೆ ಕಾಣದೆ ವಿಪರೀತ ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಸಿಲಿಕಾನ್ ಸಿಟಿ ಜನರಿಗೆ ಇಂದು ಮಳೆರಾಯ ತಂಪನ್ನೆರೆದಿದ್ದಾನೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ ಧಾರಾಕಾರ ಮಳೆಯಾಗಿದ್ದು, ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.
ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್ ರಸ್ತೆ, ಕೆಂಗಲ್ ಹನುಮಂತಯ್ಯ ರಸ್ತೆ, ಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ, ಹೆಬ್ಬಾಳ, ಎಚ್ ಎಎಲ್ ಸೇರಿದಂತೆ ನಗರದ ಹಲವೆಡೆ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ.
ಇದನ್ನು ಓದಿ :- ಅಘೋಷಿತ ‘ಕೆಪಿಸಿಸಿ ಅಧ್ಯಕ್ಷೆ’ ಕ್ಷೇತ್ರದಲ್ಲಿ ನಡೆದ ಬೇನಾಮಿ ಕಾಮಗಾರಿಗೆ ಕಾಂಗ್ರೆಸ್ ಮಾಜಿ ಕಾರ್ಯಕರ್ತ ಬಲಿ? ಕಾಂಗ್ರೆಸ್ ಟೂಲ್ ಕಿಟ್ ಭಾಗ !