ಬೆಂಗಳೂರು : ರಾಜ್ಯದಲ್ಲಿ ಒಟ್ಟು 1100 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸಲಾಗುತ್ತಿದೆ ಎಂದು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರು ಆದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಒದಗಿಸುವ ಕೆಲಸವಾಗುತ್ತಿದೆ. ಹಾಗೆಯೇ ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜೂನ್ 7 ರ ನಂತರ ಲಾಕ್ ಡೌನ್ ಮುಂದುವರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಜೂನ್ 7ರವರೆಗೆ ಲಾಕ್ ಡೌನ್ ಇದೆ. ಲಾಕ್ ಡೌನ್ ಬಗ್ಗೆ ಈಗಲೇ ಮಾತನಾಡುವುದು ಸರಿ ಇಲ್ಲ. ಈಗಲೇ ಅನ್ ಲಾಕ್ ಬಗ್ಗೆ ತೀರ್ಮಾನ ಮಾಡಲ್ಲ. ಲಾಕ್ ಡೌನ್ ನಂತರ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.