ಕೋವಿಡ್ ಕಾರಣಕ್ಕಾಗಿ ಮಳೆಗಾಲ ಆರಂಭವಾಗಿ ಎರಡು ತಿಂಗಳು ಕಳೆಯುತ್ತಾ ಬಂದಿದ್ದರೂ ಪ್ರವಾಸಿಗರಿಲ್ಲದೇ ಬಣಗುಡುತ್ತಿದ್ದ ಜೋಗ ಜಲಪಾತ ವೀಕ್ಷಣೆಗೆ ಅನುಮತಿ ನೀಡಲಾಗಿದೆ.
ರಾಜ್ಯ ಸರ್ಕಾರದ ಸೂಚನೆಯಂತೆ ಪ್ರವಾಸೋದ್ಯಮ ಇಲಾಖೆಯು ಜೋಗ ಜಲಪಾತ ವೀಕ್ಷಣೆಗೆ ಅನುಮತಿ ನೀಡಿದ್ದು, ಮೊದಲ ದಿನವೇ ನೂರಾರು ಪ್ರವಾಸಿಗರು ಭೇಟಿ ನೀಡಿ, ಜೋಗದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ.
ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ಸಹ ಆರಂಭವಾಗಿದ್ದು, ಜೋಗದ ರಾಜ, ರಾಣಿ, ರೋರರ್ ರಾಕೆಟ್ ಜಲಪಾತಗಳು ಧುಮಕುವ ದೃಶ್ಯ ರಮಣೀಯವಾಗಿದೆ. ಹೀಗಾಗಿ ನಾಳೆಯಿಂದ ಮತ್ತಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5 ರವರಗೆ ವೀಕ್ಷಣೆಗೆ ಸಮಯಾವಕಾಶ ನಿಗದಿಪಡಿಸಿದ್ದು, ಪ್ರವಾಸಿಗರಿಗೆ ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರದಂತ ಕೋವಿಡ್ ನಿಯಾಮಾವಳಿಗಳನ್ನ ಪಾಲಿಸು ವಂತೆ ಸೂಚಿಸಲಾಗಿದೆ.