ಕುಟುಂಬಸ್ಥರೊಂದಿಗೆ ಟೊಯೋಟಾ ಕಾರ್ಮಿಕರ ಬೃಹತ್ ಪಾದಯಾತ್ರೆ:

ರಾಮನಗರ: ಬಿಡದಿಯ ಬಳಿ ಇರುವ ಟೊಯೋಟಾ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕುಟುಂಬಸ್ಥರೊಂದಿಗೆ ಗುರುವಾರ ಬೃಹತ್ ಪಾದಯಾತ್ರೆ ನಡೆಸಿದರು.
ಬಿಡದಿಯ ಬಿಜಿಎಸ್ ವೃತ್ತದಲ್ಲಿ ಬಾಲಗಂಗಾಧರನಾಥ ಸ್ವಾಮಿಗಳ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಬಿಡದಿ ಪಟ್ಟಣದಿಂದ ಟೊಯೋಟಾ ಕಂಪನಿ ವರೆಗೆ ಸುಮಾರು 5 ಕಿಲೋಮೀಟರ್ ವರೆಗೆ ಬೃಹತ್ ಪಾದಯಾತ್ರೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಮಿಕರು ನಿರಂತರ 80 ದಿನಗಳ ಕಾಲ ಕಂಪನಿಯ ಆಡಳಿತ ಮಂಡಳಿ ವಿರುದ್ಧ ಟೊಯೋಟಾ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿ ಸರಕಾರವಾಗಲಿ, ಕಂಪನಿಯಾಗಲಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂಧಿಸುತ್ತಿಲ್ಲ. ಇದರಿಂದ ನೊಂದ ಕಾರ್ಮಿಕರು ಇಂದು ತಮ್ಮ ಕುಟುಂಬಸ್ಥರೊಂದಿಗೆ ಪಾದಯಾತ್ರೆ ನಡೆಸಿದ್ದಾರೆ.
ಇನ್ನು ಈ ಪಾದಯಾತ್ರೆಗೆ ಕಾಂಗ್ರೆಸ್ ನಾಯಕರು, ಕನ್ನಡಪರ ಸಂಘಟನೆಯ ಕಾರ್ಯಕರ್ತರು, ರೈತ ಸಂಘದ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ, ನರೇಂದ್ರಸ್ವಾಮಿ, ಚಲುವರಾಯಸ್ವಾಮಿ, ಕೆ.ರಾಜು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.