ರೈತರ ಖಾತೆಗೆ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ

ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ( KISAN SUMMON ) ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BASAVARAJ BOMMAI ) ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರಕಾರ ದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿರುತ್ತದೆ.

gal

2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿ ಲಭಿಸಿದೆ. 2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯ ಆಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

ಇದನ್ನೂ ಓದಿ : – ದಾಂಧಲೆ ನಡೆಸಿದವರನ್ನ ಬಂಧಿಸುವ ಬದಲು ಕಂಡಲ್ಲಿ ಗುಂಡಿಕ್ಕಿ – ಸೊಗಡು ಶಿವಣ್ಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!