ಅಪರಿಚಿತರಿಂದ ಕಾರಲ್ಲೇ ವ್ಯಕ್ತಿ ಕೊಲೆ:

ತುಮಕೂರು: ಕಾರಿನ ಡ್ರೈವಿಂಗ್ ಸೀಟಿನಲ್ಲೇ ವ್ಯಕ್ತಿಯೊರ್ವ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ದುದ್ರೈವಿಯನ್ನು ಬೆಂಗಳೂರು ಮೂಲದ ನಿಸ್ಸಾರ್ ಅಹಮದ್(40) ಎಂದು ಗುರುತಿಸಲಾಗಿದೆ. ತಡರಾತ್ರಿ ನಿಸ್ಸಾರ್ ಅವರ ಎದೆ, ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಇರಿದು ಹತ್ಯೆ ಮಾಡಲಾಗಿದೆ. ಬಳಿಕ ಹಂತಕರು ತುಂಬಾಡಿಯ ರಸ್ತೆ ಬದಿಯಲ್ಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ.
ಶನಿವಾರ ಬೆಳಗ್ಗೆ ಅಲ್ಲಿನ ಗ್ರಾಮಸ್ಥರು ನಿಂತವಾಹನವನ್ನು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಲೆಗೆ ಕಾರಣ ತಿಳಿದು ಏನು ಎಂಬುದು ಬಂದಿಲ್ಲ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.