ತುಮಕೂರಿನ (Tumakuru) ಒಳಗೆರೆಹಳ್ಳಿ ಗ್ರಾಮಸ್ಥರ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶಾಲಾ ಕಟ್ಟಡ ಬೀಳುವ ಹಂತದಲ್ಲಿದ್ದು ದುರಸ್ಥಿಗೆ ಒತ್ತಾಯಿಸಿ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಒಳಗೆರೆಹಳ್ಳಿ ಗ್ರಾಮಸ್ಥರ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಶ್ವ ಮಾನವ ಹಕ್ಕುಗಳ ಅಧ್ಯಕ್ಷರಾದ ಸಿದ್ದಲಿಂಗೇಗೌಡ (Siddegowda) ನೇತೃತ್ವದಲ್ಲಿ ಸತ್ಯಾಗ್ರಹ ನಡೆದಿದೆ. ನಿನ್ನೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮುರಿದು ಬೀಳುವ ಶಾಲಾ ಕಟ್ಟಡದಲ್ಲೇ ಮಕ್ಕಳು ಪಾಠ ಕೇಳುತ್ತಿದ್ದಾರೆ. ಯಾವಾಗ ಶಾಲಾಕಟ್ಟಡ ಬಿದ್ದು ಹೋಗುತ್ತೊ ಎಂಬ ಆತಂಕದಲಿದ್ದಾರೆ .
ಉಪವಾಸ ಸತ್ಯಾಗ್ರಹ 2 ನೇ ದಿನಕ್ಕೆ ಮುಂದುವರಿದರು ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ. ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : – EDಯಿಂದ ರಾಹುಲ್ ಗಾಂಧಿ ವಿಚಾರಣೆ – ಕೇಂದ್ರ ಸರ್ಕಾರದ ವಿರುದ್ಧ ಕೈ ನಾಯಕರ ಪ್ರತಿಭಟನೆ