ವಿಜಯನಗರ : ಎರಡು ಇನ್ನೋವಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ತಿಮ್ಮಲಾಪುರ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಾಳುಗಳ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಷ್ಟ್ರೀಯ ಹೆದ್ಧಾರಿ 50ರಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.