ಕುಡಿದ ಅಮಲಿನಲ್ಲಿ ದೇವಸ್ಥಾನದಿಂದ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಯಾದಗಿರಿ ತಾಲೂಕಿನ ಶಹಾಪುರ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ.
45 ವರ್ಷದ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಮಾಡಿದ ರಾಜು (21) ಮತ್ತು ವೀರೇಶ್ (26) ಅವರನ್ನು ಪೊಲೀಸರು ಬಂಧಿತರು.
ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಯನ್ನು ಆಟೋದಲ್ಲಿ ಅಡ್ಡಗಟ್ಟಿದ ಇಬ್ಬರು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರ ಎಸಗಿದ್ದರು.
ಸಂತ್ರಸ್ತ ಮಹಿಳೆ ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.