ರಾಜಸ್ಧಾನ ಉದಯಪುರದಲ್ಲಿ ಟೈಲರ್ ಕನ್ನಯಾ ಲಾಲ್ (Kanhaiya Lal Murder) ಶಿರಚ್ಛೇದ ಪ್ರಕರಣದ ಶನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಪ್ರಕರಣದಲ್ಲಿ ಯಾವುದೇ ಸಂಘಟನೆಯ ಒಳಗೊಳ್ಳುವಿಕೆ ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಟೈಲರ್ ಅಂಗಡಿಗೆ ನುಗ್ಗಿ ಹಿಂದೂ ಯುವಕನ ಹತ್ಯೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ.
ಈ ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು NIA ತಂಡ ಉದಯ ಪುರಕ್ಕೆ ಧಾವಿಸಿದೆ. ಇಬ್ಬರು ಮುಸ್ಲಿಂ ದಾಳಿಕೋರರು ಪ್ರಧಾನಿ ನರೇಂದ್ರ ಮೋದಿಯವರಿಗೆ ಚಾಕು ತೋರಿಸಿ, ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿತ್ತು. ಟೈಲರ್ ಮೇಲೆ ಹೇಗೆ ಹಲ್ಲೆ ನಡೆಸಲಾಗಿದೆ ಎಂಬ ಸಂಪೂರ್ಣ ವಿಡಿಯೋವನ್ನು ಆನ್ ಲೈನ್ ನಲ್ಲೇ ಹಂತಕರೇ ಬಿಡುಗಡೆ ಮಾಡಿದ್ದರು. ಮಂಗಳವಾರ ತಡರಾತ್ರಿ ಅವರಿಬ್ಬರನ್ನೂ ಬಂಧಿಸಲಾಗಿದೆ.
ಈ ಪ್ರಕರಣದ ತನಿಖೆ ನಡೆಸಲಿರುವ ಎನ್ಐಎ ಈ ಕೇಸ್ ನಲ್ಲಿ ಇತರ ಸಂಘಟನೆಗಳ ಕೈವಾಡದ ಬಗ್ಗೆಯೂ ತನಿಖೆ ನಡೆಸಲಿದೆ. ಯಾವುದೇ ಸಂಘಟನೆ ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತದೆ” ಎಂದು ಸಚಿವಾಲಯ ಟ್ವೀಟ್ ಮಾಡಿದೆ.
ಇದನ್ನೂ ಓದಿ – ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್- ರಾಜಸ್ತಾನದಲ್ಲಿ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ – ವಿಡಿಯೋ ವೈರಲ್