ಬೆಂಗಳೂರು : ರಾಜ್ಯ ಸರ್ಕಾರ ಅನ್‌ಲಾಕ್‌ಗೆ ಮಾರ್ಗಸೂಚಿ ಪ್ರಕಟಿಸಿದೆ. ಕೇವಲ 19 ಜಿಲ್ಲೆಗಳಿಗೆ ಮಾತ್ರ ಅನ್‌ಲಾಕ್ ನಿಯಮ ಅನ್ವಯವಾಗಲಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಗ್ಗೆ 6 ಗಂಟೆವರೆಗೆ ಮೊದಲ ಹಂತದ ಅನ್‌ಲಾಕ್ ಜಾರಿಗೆ ಬರಲಿದೆ. ಕೆಲ ವಲಯಗಳಿಗೆ ರಿಯಾಯ್ತಿ ನೀಡಲಾಗಿದೆ.
ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಆಹಾರ,ಹಣ್ಣು-ತರಕಾರಿ, ಮಾಂಸ,ಮೀನು, ಡೈರಿ, ಹಾಲು ಕೇಂದ್ರ, ಪಶು ಆಹಾರ ಕೇಂದ್ರಗಳನ್ನು ತೆರೆಯಲು ಅವಕಾಶ, ತಳ್ಳುಗಾಡಿ ವ್ಯಾಪಾರಿಗಳಿಗೂ ಅನುಮತಿ.
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮದ್ಯದಂಗಡಿಗಳು, ಬಾರ್, ರೆಸ್ಟೋರೆಂಟ್‌ನಿಂದ ಪಾರ್ಸಲ್‌ಗೆ ಅನುಮತಿ, ವಾಕಿಂಗ್, ಜಾಗಿಂಗ್ ಉದ್ದೇಶಕ್ಕಾಗಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಪಾರ್ಕ್‌ಗಳು ಓಪನ್.
ಎಲ್ಲಾ ರೀತಿಯ ಕಟ್ಟಡ ಕಾಮಗಾರಿ ನಡೆಸಲು ಅನುಮತಿ, ಕಟ್ಟಡ ಸಾಮಗ್ರಿ ಅಂಗಡಿಗಳ ತೆರೆಯಲು ಅವಕಾಶ*ಗರಿಷ್ಠ ಇಬ್ಬರು ಪ್ರಯಾಣಿಕರೊಂದಿಗೆ ಟ್ಯಾಕ್ಸಿ, ಆಟೋ ಸಂಚಾರಕ್ಕೆ ಅನುಮತಿ.
ಶೇಕಡ 50 ರಷ್ಟು ಸಿಬ್ಬಂದಿಯೊಂದಿಗೆ ಸರ್ಕಾರಿ ಕಚೇರಿಗಳ ಕಾರ್ಯ ನಿರ್ವಹಣೆ, ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಸಂಬಂಧಿತ ಚಟುವಟಿಕೆಗೂ ಅವಕಾಶ.
ಕನ್ನಡಕ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕಾರ್ಯ ನಿರ್ವಹಿಸಲು ಅನುಮತಿ, ಸಂಜೆ 5 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ.
ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ, ಅಗತ್ಯ ಹಾಗೂ ತುರ್ತು ಸಂದರ್ಭದಲ್ಲಿ ಹೊರತು ಪಡಿಸಿ ಕಡ್ಡಾಯವಾಗಿ ಜನರ ಸಂಚಾರಕ್ಕೆ ನಿರ್ಬಂಧ.
ಎಲ್ಲಾ ರೀತಿಯ ಉತ್ಪಾದನಾ ವಲಯ, ಕೈಗಾರಿಕೆಗಳು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ .ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವುದು ಕಡ್ಡಾಯ.
11 ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆ
ಕೋವಿಡ್ ಪಾಸಿಟಿವಿಟಿ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ಮುಂದುವರಿಯಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ,ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಮತ್ತು ಕೊಡಗು ಡಿಲ್ಲೆಗಳಲ್ಲಿ ಜೂನ್ 21ರ ಬೆಳಗ್ಗೆ 6 ಗಂಟೆವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದೆ.