ನಾಳೆ ನಡೆಯಲಿರುವ UPSC ಪರೀಕ್ಷೆ ಹಿನ್ನಲೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಒಂದು ಗಂಟೆ ಮುಂಚಿತವಾಗಿ ಮೆಟ್ರೋ ರೈಲು ಸಂಚಾರ ಆರಂಭಿಸಲು ನಿರ್ಧರಿಸಿದೆ.
ಪ್ರತಿದಿನ ಏಳು ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗುತ್ತಿದ್ದು UPSC ಪರೀಕ್ಷೆ ಹಿನ್ನಲೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ. ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಸಂಚರಿಸುವ ಮೆಟ್ರೋ ರೈಲಿನಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ತಲುಪಲು ಅನುಕೂಲವಾಗಬೇಕು ಎನ್ನುವ ನಿಟ್ಟಿನಲ್ಲಿ ಮುಂಜಾಣೆ ಆರು ಗಂಟೆಗೆ ಸೇವೆ ಆರಂಭವಾಗಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ : – ನಾಡದ್ರೋಹಿ ಅಧ್ಯಕ್ಷನ ಸಮಿತಿ ಪರಿಷ್ಕರಿಸಿರುವ ಪಠ್ಯವನ್ನು ರದ್ದುಮಾಡಿ – ಸಿದ್ದರಾಮಯ್ಯ ಆಗ್ರಹ