ಗದಗ: ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ಗದಗ ಜಿಲ್ಲೆ ಮುಂಡರಗಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ ತೀವ್ರ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೆಂಟಿಲೇಟರ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಲಾಯಿತು. ಆದರೆ, ಜಿಲ್ಲಾ ಆಸ್ಪತ್ರೆ ಆವರಣಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆಯಲ್ಲೂ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ. ತೀವ್ರ ಉಸಿರಾಟದ ತೊಂದರೆಯಿಂದ ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ಸೋಂಕಿತರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ ಜಿಲ್ಲೆಯ ಡಿಎಚ್ಓ ಹಾಗೂ ಡಿಸಿ ಸಹಿತ ಸೋಂಕಿತರಿಗೆ ವೆಂಟಿಲೆಟರ್ ಬೆಡ್ ಒದಗಿಸುವಂತೆ ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ವೆಂಟಿಲೇಟರ್ ಭರ್ತಿ ಇರುವುದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಇಬ್ಬರು ನಿನ್ನೆ ರಾತ್ರಿ ಸಾವನ್ನಪ್ಪಿದರೆ ಇಂದು ಓರ್ವ ಪುರುಷ ಸಾವನ್ನಪ್ಪಿದ್ದಾರೆ.