ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ (JAMUNA)ಇಂದು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಇದನ್ನು ಓದಿ :- ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ
ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ ನಲ್ಲಿರುವ ಫಿಲಂ ಚೇಂಬರ್ ಗೆ ತರಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯಭಾಮ ಪಾತ್ರದ ಮೂಲಕ ಜಮುನಾ ಹೆಚ್ಚು ಗುರುತಿಸಲ್ಪಟ್ಟರು. ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು. ತೆಲುಗಿನಲ್ಲಿ ಸುಮಾರು 100 ಚಿತ್ರಗಳಲ್ಲಿ ಅವರು ನಟಿಸಿದ್ದರು.
ಇದನ್ನು ಓದಿ :- ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗುವುದು ನಿಶ್ಚಿತ- ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ – ಸಿ.ಎಂ.ಇಬ್ರಾಹಿಂ