ತಮಿಳು ಹಿರಿಯ ನಿರ್ಮಾಪಕ ಕೆ.ಮುರಳೀಧರನ್ ನಿಧನ

ಸೌತ್ ಸಿನಿಮಾರಂಗದ ಹಿರಿಯ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ನಿವಾಸದಲ್ಲಿ ಮುರಳೀಧರನ್ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಸೌತ್ ಸಿನಿಮಾರಂಗದ ಹಿರಿಯ ನಿರ್ಮಾಪಕ ಮುರಳೀಧರನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ನಿವಾಸದಲ್ಲಿ ಮುರಳೀಧರನ್ ( MURULIDHARAN ) ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರು ಆಗಿದ್ದರು. ಕೆ. ಮುರಳೀಧರನ್ ಲಕ್ಷ್ಮಿ ಮೂವೀ ಮೇಕರ್ಸ್ ಎನ್ನುವ ಸಿನಿಮಾ ನಿರ್ಮಾಣ ಹುಟ್ಟುಹಾಕಿದ್ದರು.

K Muralidharan: ಹಿರಿಯ ನಿರ್ಮಾಪಕ ಕೆ. ಮುರಳೀಧರನ್ ಇನ್ನಿಲ್ಲ! | Veteran movie producer K Muralidharan passes away due to heart attack Celebrities pay tributes– News18 Kannada

ಈ ಸಂಸ್ಥೆ ಮೂಲಕ ಅವರು ಅನ್ಬೇ ಶಿವಂ, ಪುದುಪೆಟ್ಟೈ ಹಲವಾರು ಸೂಪರ್ ಹಿಟ್ಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಅವರಿಗಿದೆ. ಲಕ್ಷ್ಮಿ ಮೂವೀ ಮೇಕರ್ಸ್ ತಮಿಳು ಸಿನಿಮಾರಂಗದ ಪ್ರಸಿದ್ಧ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಬ್ಯಾನರ್‌ ನಲ್ಲಿ ಬಂದ ಅನೇಕ ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್ ಆಗಿವೆ. ದೊಡ್ಡ ಕಲಾವಿದರ ಜೊತೆಯೂ ಅನೇಕ ಸಿನಿಮಾಗಳನ್ನು ಮಾಡಿದೆ. ಮುರಳೀಧರನ್ ಅವರ ಲಕ್ಷ್ಮಿ ಮೂವೀ ಮೇಕರ್ಸ್ ಸಂಸ್ಥೆಯಡಿ ಕಮಲ್ ಹಾಸನ್ ಜೊತೆ ಅನ್ಬೇ ಶಿವಂ, ಕಾರ್ತಿಕ್ ಜೊತೆ ಗೋಕುಲತಿಲ್ ಸೀತೈ, ವಿಜಯ್ ಜೊತೆ ಪ್ರಿಯಾಮುದನ್, ನಟ ಧನುಷ್ ಜೊತೆ ಪುದುಪೆಟ್ಟೈ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಹಿರಿಯ ನಿರ್ಮಾಪಕ ಮುರಳೀಧರನ್ ನಿಧನಕ್ಕೆ ಸೌತ್ ಚಿತ್ರರಂಗ ಕಂಬನಿ ಮಿಡಿದಿದೆ.

ಇದನ್ನೂ ಓದಿ : –  ನಟಿ ಹರಿಪ್ರಿಯಾ-ವಸಿಷ್ಠ ಸಿಂಹ ನಿಶ್ಚಿತಾರ್ಥ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!