ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ (NDA) ಯಿಂದ ಮುಸ್ಲಿಂ ಸಮುದಾಯದ ಮೂವರು ಹಾಗೂ ಸಿಖ್ ಸಮುದಾಯದ ಓರ್ವ ನಾಯಕರ ಹೆಸರು ಕೇಳಿ ಬರುತ್ತಿದೆ. ಉಪರಾಷ್ಟ್ರಪತಿ ಅಭ್ಯರ್ಥಿ ಹೆಸರಿಸಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಸಮರ್ಥ, ವಿವಾದರಹಿತ ನಾಯಕನನ್ನು ಆಯ್ಕೆ ಮಾಡಲು ತೀವ್ರ ಹುಡುಕಾಟ ನಡೆಯುತ್ತಿದೆ”
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ( Mukhtar Abbas Naqvi ) ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammad Khan ) ಮತ್ತು ಕೇಂದ್ರದ ಮಾಜಿ ಸಚಿವೆ ನಜ್ಮಾ ಹೆಪ್ತುಲ್ಲಾ ಹೆಸರುಗಳು ಕೇಳಿ ಬರುತ್ತಿವೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ (Amarinder Singh) ಆಡಳಿತಾರೂಢ ಮೈತ್ರಿಕೂಟದಿಂದ ನಾಲ್ಕನೇ ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ.
ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಮುಂದಿನ ಉಪರಾಷ್ಟ್ರಪತಿ ಆಗಸ್ಟ್ 11 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 22 ಕೊನೆಯ ದಿನಾಂಕವಾಗಿದೆ.
ಅಗತ್ಯವಿರುವ ಪ್ರೊಫೈಲ್ ಪ್ರಕಾರ ಯಾರೂ ಸಿಗದಿದ್ದರೆ, ಪಕ್ಷವು ಆರಿಫ್ ಮೊಹಮ್ಮದ್ ಖಾನ್, ನಖ್ವಿ, ನಜ್ಮಾ ಹೆಪ್ತುಲ್ಲಾ ಮತ್ತು ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಹೆಸರುಗಳಲ್ಲಿ ಯಾವುದಾದರೂ ಒಂದು ಹೆಸರನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದ್ದಾರೆ. 16ನೇ ಉಪರಾಷ್ಟ್ರಪತಿಗಳನ್ನ ಆಯ್ಕೆ ಮಾಡಲು ಆಗಸ್ಟ್ 6 ರಂದು ನಡೆಯಲಿರುವ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಇದನ್ನೂ ಓದಿ : – ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್