ಈಶ್ವರಪ್ಪ ರಾಜೀನಾಮೆಗೆ ಕೈ ಪಟ್ಟು: ವಿಧಾನಪರಿಷತ್ ಮಧ್ಯಾಹ್ನಕ್ಕೆ ಮುಂದೂಡಿಕೆ

ರಾಷ್ಟ್ರಧ್ವಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೆಎಸ್ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ವಿಧಾನಪರಿಷತ್ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.

ಗುರುವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದೂ ಅಲ್ಲದೇ ಅನ್ಯಾಯ ಅನ್ಯಾಯ ಎಂದು ಘೋಷಣೆ ಕೂಗಲು ಆರಂಭಿಸಿದರು.

ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿ ಕಲಾಪ ಮುಂದುವರಿಸಲು ಯತ್ನಿಸಿದರು. ಈ ವೇಳೆ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಇಂತಹ ಸಂದರ್ಭದಲ್ಲೂ ಕಲಾಪ ಹೇಗೆ ಮುಂದುವರಿಸುತ್ತೀರಿ? ಸರಕಾರ ಇದೆಯೋ ಇಲ್ಲವೋ ಎಂದು ಹೇಳಿದರು. ಸಭಾಪತಿ ಕೂಡಲೇ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!