ವಿಜಯಪುರದಲ್ಲಿ ಹೋಳಿ ಹಬ್ಬದ ಬಣ್ಣದಾಟಕ್ಕೆ ಬಾಲಕ ಬಲಿಯಾಗಿದ್ದಾನೆ. ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಅವಘಡ ಸಂಭವಿಸಿದ್ದು ಹಣಮಂತ ಬೀರಪ್ಪ ವಾಲಿಕಾರ (12) ಮೃತ ಬಾಲಕ. ಬಣ್ಣದಾಟಕ್ಕೆ ನೀರಿನ ಟ್ಯಾಂಕಿನಿಂದ ನೀರು ತುಂಬಲು ಹೋಗಿದ್ದಾಗ ಅವಘಡ ಸಂಭವಿಸಿದೆ. ನೀರಿನ ಟ್ಯಾಂಕಿಗೆ ವಿದ್ಯುತ್ ತಂತಿ ಕಟ್ಟಾಗಿ ಬಿದ್ದಿತ್ತು. ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಪೋಷಕರು ಪ್ರತಿಭಟನೆ ನಡೆಸಿದ್ರು. ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್.ಟಿ.ಪಿ.ಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 86 Less than a minute