ವಿಜಯಪುರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಭಾವ ಚಿತ್ರಕ್ಕೆ ಅವಮಾನ ಮಾಡಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಮಾರ್ಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ನಿಲ್ಲಿಸಿದ್ದ ಅಂಬೇಡ್ಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಸುದ್ದಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ದಲಿತ ಪರ ಸಂಘಟನೆಗಳು, ಗ್ರಾಮಸ್ಥರು , ಮಹಿಳೆಯರು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ದುಷ್ಕರ್ಮಿಗಳನ್ನ ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು ಪ್ರತಿಭಟನಾಕಾರರ ಒತ್ತಾಯಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಇಂಡಿ ಗ್ರಾಮೀಣ ಸಿಪಿಐ ರಾಜಶೇಖರ ಬಡದೇಸಾರ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ಅವಮಾನಿಸಿದವರನ್ನು ಬಂಧಿಸುವಂತೆ ದಲಿತ ಮುಖಂಡ ರಸ್ತೆಯ ತಡೆ ಮುಂದುವರೆಸಿದ್ದು, ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.