ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ (B. Y. Vijayendra )ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡಿದ ಅವರು ಶ್ರೀಗಳ ಜನ್ಮದಿನದಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸುತ್ತೂರು ದೇಶಿಕೇಂದ್ರ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್‌ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ (AMIT SHAH) ಹಾಗೂ ಪ್ರಹ್ಲಾದ್ ಜೋಶಿ, ಭಗವಂತ ಖೂಬ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸಲಿದ್ದಾರೆ. ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ 2 ಗಂಟೆ ಕಾಲ ಉಪಸ್ಥಿತರಿರಲಿದ್ದಾರೆ. ಮಠದಲ್ಲಿ ಪ್ರಸಾದ ಸೇವಿಸಿದ ಬಳಿಕ ಹೊರಡ್ತಾರೆ ಎಂದುಎಂದು ವಿಜಯೇಂದ್ರ ಹೇಳಿದ್ರು. ಇದೊಂದು ಐತಿಹಾಸಿಕ ಕಾರ್ಯಕ್ರಮ ಅಂದ್ರೆ ತಪ್ಪಾಗಲಾರದು ಎಂಎಂದು ಹೇಳಿದ್ರು. ನೂರಾರು ಸಂಖ್ಯೆಯಲ್ಲಿ ಮಠಾಧೀಶರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದೆ.