ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಹಿಂಡಾಲಾಗಾ ಜೈಲಿನಲ್ಲಿ ಬಂಧಿಯಾಗಿದ್ದ ವಿನಯ್ ಕುಲಕರ್ಣಿ ಗೆ ಸಾಕ್ಷ್ಯನಾಶ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಜಾಮೀನು ಲಭಿಸಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಕೊಲೆ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಇದೀಗ ಸಾಕ್ಷ್ಯ ನಾಶ ಪ್ರಕರಣದಲ್ಲೂ ಜಾಮೀನು ಸಿಕ್ಕಿದೆ.
ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂಟರ್ ಸ್ಟಿಂಗ್ ವಿಚಾರ ಅಂದ್ರೆ ವಿನಯ್ ಕುಲಕರ್ಣಿ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ. ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ.